ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಿಲ್ಲವ ಸಮಾಜಕ್ಕೆ ಅವಹೇಳನ ಆರೋಪ - ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು..

ಬಿಲ್ಲವ ಸಮಾಜಕ್ಕೆ ಅವಹೇಳನ ಆರೋಪ - ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು..

 

 

 

ಬೆಳ್ತಂಗಡಿ : ಬಿಲ್ಲವ ಸಮಾಜಕ್ಕೆ ಅಶ್ಲೀಲ ಪದಗಳಿಂದ ಅವಹೇಳನಗೈದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಅನಿತಾ ಕಾಸರಗೋಡು ವಿರುದ್ಧ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಅನಿತಾ ಕಾಸರಗೋಡು ಎಂಬ ಖಾತೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ "ಪೂಜಾರಿಗಳು ಮತ್ತು ಶೆಟ್ಟಿಗಳು ಎಂಬ ಜಾತಿಯ ಹೆಸರಿನ ಪದಗಳನ್ನು ಬಳಸಿ" ಅಶ್ಲೀಲವಾಗಿ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ. ಅನಿತಾ ಕಾಸರಗೋಡು ವಿರುದ್ಧ ಕಾನೂನಾತ್ಮಕವಾದ ಕ್ರಮವನ್ನು ಕೈಗೊಳ್ಳಬೇಕು, ಇಲ್ಲದೇ ಇದ್ದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ವತಿಯಿಂದ ಹೋರಾಟವನ್ನು ನಡೆಸಲಾಗುವುದು ಎಂದು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪುರವರು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ಇದರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!