ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಎಕ್ಸೆಲ್ ಕಾಲೇಜು ಮಾನ್ಯತೆ ರದ್ದು ಸುಳ್ಳು ಸುದ್ದಿ; ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ:

ಎಕ್ಸೆಲ್ ಕಾಲೇಜು ಮಾನ್ಯತೆ ರದ್ದು ಸುಳ್ಳು ಸುದ್ದಿ; ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ:

 

 

ಬೆಳ್ತಂಗಡಿ: ಇತ್ತೀಚೆಗೆ ಕೆಲವು ಎಲೆಕ್ಟ್ರಾನಿಕ್ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದಾಗಿದೆ ಎಂಬ ಸುದ್ದಿ ಪ್ರಸಾರವಾಗುತ್ತಿದ್ದು, ಈ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಕಾಲೇಜು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜು ಕೋಡ್ SS0351 ರ ಅಡಿಯಲ್ಲಿ ದಾಖಲಾತಿ ಮಾಡಲಾಗಿದೆ. ಈ ಕಾಲೇಜು ಕೋಡ್‌ನ ಮಾನ್ಯತೆ ಹಾಗೂ ವಿದ್ಯಾರ್ಥಿಗಳ ದಾಖಲಾತಿ ವಿವರಗಳನ್ನು ವಿದ್ಯಾರ್ಥಿಗಳ SATS ಸಂಖ್ಯೆಯ ಮೂಲಕ ಹತ್ತಿರದ ಡಿಡಿಪಿಯು ಕಚೇರಿ ಅಥವಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪರಿಶೀಲಿಸಿ ಖಚಿತಪಡಿಸಿಕೊಳ್ಳಬಹುದು.

 

https://youtu.be/8huJXiZLBK4?si=HTZNH8r3JR-YvjXH

 

ಮಾನ್ಯತೆ ರದ್ದಾದುದು SS0376 ಕೋಡ್ ಮಾತ್ರ, ಕಾಲೇಜು ಅಲ್ಲ , ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಇಲ್ಲ

ಪ್ರಸ್ತುತ ಮಾನ್ಯತೆ ರದ್ದುಗೊಂಡಿರುವುದು ಕಾಲೇಜು ಕೋಡ್ SS0376 ಆಗಿದೆ. ಕಳೆದ ವರ್ಷ ಈ ಕೋಡ್‌ಗೆ ಮಾನ್ಯತೆ ಪಡೆಯಲು ಅರ್ಜಿ ಸಲ್ಲಿಸಲಾಗಿತ್ತು. ಆದರೆ ಈ ಕೋಡ್ ಅಡಿಯಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಲಾಗಿಲ್ಲ. ಅಲ್ಲದೆ, ಈ ವರ್ಷದ ಮಾರ್ಚ್ ತಿಂಗಳ ಕೊನೆಯಲ್ಲಿಯೇ ಈ ಕೋಡ್‌ನ ಮಾನ್ಯತೆಯನ್ನು ರದ್ದುಗೊಳಿಸುವಂತೆ ಸಂಸ್ಥೆಯೇ ಅರ್ಜಿ ಸಲ್ಲಿಸಿತ್ತು.

ಆದಾಗ್ಯೂ, ಕೆಲವು ದುರುದ್ದೇಶಪೂರಿತ ವ್ಯಕ್ತಿಗಳು ಸಂಸ್ಥೆಯ ಘನತೆ ಹಾಗೂ ವಿಶ್ವಾಸಾರ್ಹತೆಯನ್ನು ಹಾಳು ಮಾಡುವ ಉದ್ದೇಶದಿಂದ “ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು” ಎಂಬ ತಪ್ಪು ಮತ್ತು ಸುಳ್ಳು ಮಾಹಿತಿಯನ್ನು ಎಲೆಕ್ಟ್ರಾನಿಕ್ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುತ್ತಿದ್ದಾರೆ.

ಆದ್ದರಿಂದ ವಿದ್ಯಾರ್ಥಿಗಳು, ಪೋಷಕರು, ಪತ್ರಿಕಾ ಬಂಧುಗಳು ಹಾಗೂ ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ, ಅಧಿಕೃತ ಮೂಲಗಳಿಂದ ಮಾಹಿತಿಯನ್ನು ಪರಿಶೀಲಿಸಿ ಸಹಕರಿಸುವಂತೆ ಕಾಲೇಜು ಆಡಳಿತ ಮಂಡಳಿ ವಿನಂತಿಸಿದೆ. ಹಾಗೂ ಸುಳ್ಳು ಸುದ್ದಿ ಹರಡುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!