ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಾಳೆ ಧರ್ಮಸ್ಥಳದಲ್ಲಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ:

ನಾಳೆ ಧರ್ಮಸ್ಥಳದಲ್ಲಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ:

 

 

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ),ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ( ರಿ) ಧರ್ಮಸ್ಥಳ, ಇದರ ಆಶ್ರಯದಲ್ಲಿ ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ವ್ಯಸನಮುಕ್ತರ ಸಮ್ಮೀಲನ ಮತ್ತು ಶತದಿನೋತ್ಸವ ಕಾರ್ಯಕ್ರಮವು ನಾಳೆ ಜೂನ್ 12 ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶ್ರೀ ಅರಮೇರಿ ಕಳಂಚೇರಿ ಮಠ ವಿರಾಜಪೇಟೆ ಕೊಡಗು ಇಲ್ಲಿನ ಶ್ರೀ. ನಿ .ಪ್ರ.ಸ್ವ .ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ಆಶೀರ್ವಚನ ಮಾಡಲಿದ್ದಾರೆ. ಉದ್ಘಾಟನೆಯನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ, ವಾರ್ಷಿಕ ವರದಿಯನ್ನು ಜ್ಞಾನ ವಿಕಾಸ ಕಾರ್ಯಕ್ರಮ ಧರ್ಮಸ್ಥಳ ಅಧ್ಯಕ್ಷರು ಹೇಮಾವತಿ ವೀ. ಹೆಗ್ಗಡೆ ಬಿಡುಗಡೆಗೊಳಿಸಲಿದ್ದಾರೆ. ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ನವಜೀವನ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರದ್ಧಾ ಅಮಿತ್ 'ನವಜೀವನ' ಕಿರು ಚಿತ್ರ ಹಸ್ತಾಂತರ ಮಾಡಲಿದ್ದಾರೆ. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್. ಎಸ್. ಆಶಯ ನುಡಿಗಳನ್ನಾಡಲಿದ್ದಾರೆ. ವಿ.ರಾಮಸ್ವಾಮಿ, ಪ್ರಕಾಶ್ ಕಾರಂತ್, ಗಿರೀಶ್ ಕೆ.ಗೌರವ ಉಪಸ್ಥಿತರಿರಲಿದ್ದಾರೆ.ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಇದರ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್. ಪಾಯ್ಸ್ ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!