ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ: ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಯವರಿಗೆ ಬೀಳ್ಕೊಡುಗೆ ಸಮಾರಂಭ:

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ: ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಯವರಿಗೆ ಬೀಳ್ಕೊಡುಗೆ ಸಮಾರಂಭ:

 

 

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಇಲ್ಲಿ ಕಳೆದ 35 ವರ್ಷ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದುತ್ತಿರುವ  ರಾಜು ಶೆಟ್ಟಿ ಇವರಿಗೆ ಬೀಳ್ಕೊಡುಗೆ ಸಮಾರಂಭವು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಜೂನ್ 30 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಶ್ರೀಧರ್ ಭಿಡೆ ತಿಳಿಸಿದರು.ಅವರು ಬೆಳ್ತಂಗಡಿ ಪತ್ರಕರ್ತರ ಸಂಘದಲ್ಲಿ  ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.ರಾಜು ಶೆಟ್ಟಿ ಇವರು ನಮ್ಮ ಸಂಘದಲ್ಲಿ 1989 ಜೂನ್ 24 ರಂದು ಸೇವೆಗೆ ನೇಮಕ ಹೊಂದಿ 1995 ಫೆ 01 ರಿಂದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಸುಧೀರ್ಘ ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅವರ ಸೇವಾವಧಿಯಲ್ಲಿ ಸಂಘವು ಅನೇಕ ಸಾಧನೆಗಳನ್ನು ಮಾಡಿದೆ.ಜೂನ್ 30 ಮಂಗಳವಾರ ಬೆಳಗ್ಗೆ 11.30 ಕ್ಕೆ ಬೀಳ್ಕೊಡುಗೆ ಸಮಾರಂಭದಲ್ಲಿ ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಅಧ್ಯಕ್ಷ ಶ್ರೀಧರ್ ಜಿ. ಭಿಡೆ ಅಧ್ಯಕ್ಪತೆ ವಹಿಸಲಿದ್ದಾರೆ ‌ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ಎಸ್. ಆರ್. ಸತೀಶ್ಚಂದ್ರ ಅಧ್ಯಕ್ಷರು ಕ್ಯಾಂಪ್ಕೋ ಲಿ ಮಂಗಳೂರು, ಮಾಜಿ ಸಚಿವ ಗಂಗಾಧರ ಗೌಡ, ರಮೇಶ್ ಎಚ್. ಎನ್. ಸಹಕಾರಿ ಸಂಘಗಳ ಉಪನಿಬಂಧಕರು ಮಂಗಳೂರು, ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಗ್ರೇಸಿಯನ್ ವೇಗಸ್, ಬಾಲಕೃಷ್ಣ ಗೌಡ ಕೇರಿಮಾರ್, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಪ್ರಸಾದ್ ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!