ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › RSS ವಿರುದ್ಧ ಅಪಮಾನಕಾರಿ ಹೇಳಿಕೆ ಆರೋಪ: ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಸಮನ್ಸ್ ಜಾರಿ:

RSS ವಿರುದ್ಧ ಅಪಮಾನಕಾರಿ ಹೇಳಿಕೆ ಆರೋಪ: ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಸಮನ್ಸ್ ಜಾರಿ:

 

 

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್​ಎಸ್​ಎಸ್​)ದ ವಿರುದ್ಧ ಅಪಮಾನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಅವರಿಗೆ ನಗರದ ವಿಚಾರಣಾ ನ್ಯಾಯಾಲಯ ಖುದ್ದು ಹಾಜರಾಗುವಂತೆ ಸಮನ್ಸ್​ ಜಾರಿ ಮಾಡಿ ಆದೇಶಿಸಿದೆ.

ಪ್ರಕರಣ ಸಂಬಂಧ ಬೆಂಗಳೂರು ಸಿದ್ದಾಪುರದ ನಿವಾಸಿ ಎ.ತೇಜಸ್​ ಎಂಬುವರು ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ, ಪ್ರಕರಣ ಸಂಬಂಧ ಪ್ರಿಯಾಂಕ್ ಖರ್ಗೆ ಮತ್ತು ಹ್ಯಾರಿಸ್ ನಲಪಾಡ್​ ಅವರ ವಿರುದ್ಧ ಕಾಗ್ನಿಜೆನ್ಸ್​ ತೆಗೆದುಕೊಂಡು ಸಮನ್ಸ್​ ಜಾರಿ ಮಾಡಿ, ಜುಲೈ 21ರಂದು ಖುದ್ದು ಹಾಜರಾಗಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ: ಆರ್​ಎಸ್​ಎಸ್​ ಸಂಘಟನೆಯ ಮೇಲೆ ನಿಷೇಧ ಹೇರಬೇಕು, ಸರ್ಕಾರಿ ಶಾಲೆ, ಸರ್ಕಾರಿ ಸ್ಥಳಗಳು, ಮೈದಾನಗಳಲ್ಲಿ ಈ ಸಂಘಕ್ಕೆ ಯಾವುದೇ ರೀತಿಯ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಈ ಸಂಘಟನೆಯಿಂದ ಸಮಾಜದಲ್ಲಿ ಭಯದ ವಾತಾವರಣ ಉಂಟುಮಾಡುತ್ತಿದೆ. ಮಕ್ಕಳು ಮತ್ತು ಯುವಕರಲ್ಲಿ ನಕಾರಾತ್ಮ ಶಕ್ತಿ ಮತ್ತು ಮೂಲಭೂೂತವಾದಿ ಸಿದ್ದಾಂತಗಳನ್ನು ತುಂಬುತ್ತಾರೆ. ಆದ್ದರಿಂದ ಅವರ ಚಟುವಟಿಕೆಗಳ ಮೇಲೆ ನಿರ್ಬಂಧ ಹೇರಬೇಕು ಎಂದು ಪ್ರಿಯಾಂಕ್ ಖರ್ಗೆ ಅವರು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಕೋರಿದ್ದರು.

ಜೊತೆಗೆ, ಆ ಪತ್ರವನ್ನು ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿಯೂ ಹಂಚಿಕೆಕೊಂಡು, ಆರ್​ಎಸ್​ಎಸ್​ ಜತೆಯಲ್ಲಿ ಸ್ನೇಹ ಮಾಡಬಾರದು ಎಂಬುದಾಗಿ ಹೇಳಿಕೊಂಡಿದ್ದಾರೆ. ಅದೇ ರೀತಿಯಲ್ಲಿ ಮೂರನೇ ಆರೋಪಿಯಾಗಿರುವ ನಲಪಾಡ್​, ಖಾಸಗಿ ಯೂಟ್ಯೂಬ್​ ಚಾನಲ್​ನಲ್ಲಿ ಆರ್​ಎಸ್​ಎಸ್​ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಎರಡೂ ಹೇಳಿಕೆಗಳು ರಾಜ್ಯಾದ್ಯಂತ ಹರಿದಾಡಿವೆ. ಆದ್ದರಿಂದ ಈ ರೀತಿಯ ಅಧಾರ ರಹಿತ ಹೇಳಿಕೆಗಳನ್ನು ನೀಡಿ ಸಂಘದ ಗೌರವಕ್ಕೆ ಧಕ್ಕೆ ತಂದಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.

ಪ್ರಕರಣದ ಎರಡನೇ ಆರೋಪಿಯಾಗಿರುವ ಮಾಜಿ ಸಚಿವ ದಿನೇಶ್​ ಗುಂಡೂರಾವ್​ ಅವರ ವಿರುದ್ಧದ ಆರೋಪವನ್ನು ಕೈಬಿಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!