ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಳಂಜ- ಸುದೆಗುಂಡಿ ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕ ಹರೀಶ್ ಪೂಂಜ ಶಿಲಾನ್ಯಾಸ :

ಬಳಂಜ- ಸುದೆಗುಂಡಿ ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕ ಹರೀಶ್ ಪೂಂಜ ಶಿಲಾನ್ಯಾಸ :

 

 

 

ಬೆಳ್ತಂಗಡಿ: ಕಳೆದ ಹಲವು ವರ್ಷಗಳಿಂದ ಬಳಂಜ- ಸುದೆಗುಂಡಿ- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಯಾದ ಬಳಂಜ ಸುದೆಗುಂಡಿ ರಸ್ತೆ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜ ಜು. 12ರಂದು ಶಿಲಾನ್ಯಾಸ ನೆರವೇರಿಸಿದರು.

ರೂ 1 ಕೋಟಿ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣಗೊಳ್ಳುತ್ತಿದ್ದು ಬಳಂಜ- ನಾಲ್ಕೂರು- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಗೆ ಸ್ಪಂದಿಸುವುದಾಗಿ ಶಾಸಕ ಹರೀಶ್ ಪೂಂಜ ತಿಳಿಸಿದರು.

ಬಳಂಜ-ನಾಲ್ಕೂರು- ತೆಂಕಕಾರಂದೂರುವಿನ ಆಟೋ ಚಾಲಕ ಮಾಲಕ ಸಂಘದಿಂದ ಸುಸಜ್ಜಿತ ಆಟೋ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಿಕೊಡುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ, ಸಂತೋಷ್ ಕುಮಾರ್ ಕಾಪಿನಡ್ಕ, ಸತೀಶ್ ರೈ ಬಾರ್ದಡ್ಕ, ಯುವರಾಜ್ ಜೈನ್,ಗಣೇಶ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಅಗ್ನೀವೀರ್ ಯೋಜನೆಯಲ್ಲಿ ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜದ ರಂಜಿತ ಸಹೋದರರ ಹೆತ್ತವರನ್ನು ಗೌರವಿಸಲಾಯಿತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!