ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ:ಹೊನ್ನಾವರ ಮಂಕಿ ಪೊಲೀಸ್ ಠಾಣಾ ಪಿಎಸ್ಐ ಬಂಧನ:

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ:ಹೊನ್ನಾವರ ಮಂಕಿ ಪೊಲೀಸ್ ಠಾಣಾ ಪಿಎಸ್ಐ ಬಂಧನ:

 

 

ಕಾರಾವಾರ:  ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಅಭಿನಂದನ್ ಅವರನ್ನು ಪೋಕ್ಸೋ  ಪ್ರಕರಣದಲ್ಲಿ ಭಟ್ಕಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

​ಘಟನೆಯ ಹಿನ್ನೆಲೆ: ​ಮೂಲಗಳ ಪ್ರಕಾರ, ಯಲ್ಲಾಪುರ ಮೂಲದ ಅಪ್ರಾಪ್ತೆಗೆ ಪಿಎಸ್‌ಐ ಅಭಿನಂದನ್ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ಕುರಿತು ಸಂತ್ರಸ್ತ ಬಾಲಕಿಯು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದೂರು ದಾಖಲಿಸಿದ್ದರು.

ಪೊಲೀಸ್ ಕಾರ್ಯಾಚರಣೆ: ಬಾಲಕಿ ನೀಡಿದ ದೂರಿನ ಅನ್ವಯ ತಕ್ಷಣವೇ ಕಾರ್ಯಪ್ರವೃತ್ತರಾದ ಭಟ್ಕಳ ನಗರ ಠಾಣೆಯ ಪೊಲೀಸರು, ಮಂಕಿ ಪಿಎಸ್‌ಐ ಅಭಿನಂದನ್ ಅವರನ್ನು ವಶಕ್ಕೆ ಪಡೆದು, ತೀವ್ರ ವಿಚಾರಣೆಯ ಬಳಿಕ ಬಂಧಿಸಿದ್ದಾರೆ.

ಕಾನೂನು ರಕ್ಷಣೆ ಮಾಡಬೇಕಾದ ಉನ್ನತ ಅಧಿಕಾರಿಯೇ ಇಂತಹ ಗಂಭೀರ ಪ್ರಕರಣದಲ್ಲಿ ಬಂಧನವಾಗಿರುವುದು ಜಿಲ್ಲೆಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದ ಕುರಿತು ಭಟ್ಕಳ ನಗರ ಠಾಣೆ ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!