ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ನದಿಯಲ್ಲಿ ಸ್ನಾನಕ್ಕಿಳಿದ 21 ವರ್ಷದ ಯುವಕ ಮುಳುಗಿ ಸಾವು .

ಬೆಳ್ತಂಗಡಿ: ನದಿಯಲ್ಲಿ ಸ್ನಾನಕ್ಕಿಳಿದ 21 ವರ್ಷದ ಯುವಕ ಮುಳುಗಿ ಸಾವು .




ಬೆಳ್ತಂಗಡಿ: ಸ್ನೇಹಿತರೊಂದಿಗೆ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅ.20ರಂದು ಮಧ್ಯಾಹ್ನ ನಿಡ್ಲೆ ಗ್ರಾಮದ ಪಾರ್ಪಿಕಲ್ಲು ಎಂಬಲ್ಲಿ ನಡೆದಿದೆ.



ಮೃತ ಯುವಕನನ್ನು ಕೌಕ್ರಾಡಿ ಗ್ರಾಮದ ಮೂಡುಬೈಲ್ ನಿವಾಸಿ ಜನಾರ್ದನ ಗೌಡ ಅವರ ಪುತ್ರ ಕೀರ್ತನ್ (21) ಎಂದು ಗುರುತಿಸಲಾಗಿದೆ.



ಕೀರ್ತನ್ ಅವರು ಸ್ನೇಹಿತರೊಂದಿಗೆ ಮಧ್ಯಾಹ್ನ ಸ್ನಾನಕ್ಕಾಗಿ ನಿಡ್ಲೆ ಗ್ರಾಮದ ಪಾರ್ಪಿಕಲ್ಲು ಪ್ರದೇಶಕ್ಕೆ ತೆರಳಿದ್ದರು. ಎಲ್ಲರೂ ನದಿಗೆ ಇಳಿದು ಸ್ನಾನ ಮಾಡುತ್ತಿದ್ದ ವೇಳೆ ನೀರಿನ ಆಳದ ಅರಿವಿಲ್ಲದೆ ಕೀರ್ತನ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.




ಘಟನೆ ಗಮನಿಸಿದ ಸ್ಥಳೀಯರು ತಕ್ಷಣ ನೀರಿನಿಂದ ಕೀರ್ತನ್ ಅವರನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ ಘಟನೆಯ ಮಾಹಿತಿ ತಿಳಿದು ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!