ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಾವೂರು: ವೈದ್ಯರ ಕ್ಲಿನಿಕ್‌ಗೆ ಬೆಂಕಿ – ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ನಾವೂರು: ವೈದ್ಯರ ಕ್ಲಿನಿಕ್‌ಗೆ ಬೆಂಕಿ – ಮೂವರು ಆರೋಪಿಗಳು ಪೊಲೀಸ್ ವಶಕ್ಕೆ




ಬೆಳ್ತಂಗಡಿ: ನಾವೂರು ಗ್ರಾಮದ ವೈದ್ಯ ಡಾ. ಪ್ರದೀಪ್ ಎ. (51) ಅವರು ನಡೆಸುತ್ತಿದ್ದ ಕ್ಲಿನಿಕ್‌ಗೆ ಬೆಂಕಿ ಹಚ್ಚಿ, ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.




ನಡ ಗ್ರಾಮದ ನಿವಾಸಿ ಡಾ. ಪ್ರದೀಪ್ ಅವರು ಬೆಳ್ತಂಗಡಿಯ ನಾವೂರಿನಲ್ಲಿ ಕ್ಲಿನಿಕ್ ನಡೆಸುತ್ತಿದ್ದರು. ಅಕ್ಟೋಬರ್ 6ರಂದು ರಾತ್ರಿ ಕಿಡಿಗೇಡಿಗಳು ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪರಿಣಾಮ ಔಷಧಿಗಳು ಹಾಗೂ ವೈದ್ಯಕೀಯ ಸಲಕರಣೆಗಳು ಸೇರಿದಂತೆ ಅಂದಾಜು ₹2ರಿಂದ ₹3 ಲಕ್ಷ ಮೌಲ್ಯದ ಸೊತ್ತುಗಳು ಸುಟ್ಟುಹೋಗಿದ್ದವು.






ಈ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ನಾವೂರು ನಿವಾಸಿಗಳಾದ ರವಿ ಕುಮಾರ್ (31), ಸುರೇಶ್ ಪಿ.ಎನ್. (44) ಮತ್ತು ದಿನೇಶ್ ಪ್ರಭು (51) ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!