ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕಾಡಿನಲ್ಲಿ ಅಕ್ರಮ ಮರ ಕಡಿದು ದಾಸ್ತಾನು;ವ್ಯಕ್ತಿಯ ವಿರುದ್ದ ಪ್ರಕರಣ: ದಾಖಲು.

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕಾಡಿನಲ್ಲಿ ಅಕ್ರಮ ಮರ ಕಡಿದು ದಾಸ್ತಾನು;ವ್ಯಕ್ತಿಯ ವಿರುದ್ದ ಪ್ರಕರಣ: ದಾಖಲು.


ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವನ್ಯಜೀವಿ ವಿಭಾಗಕ್ಕೆ ಸೇರಿದ ಅರಣ್ಯದಲ್ಲಿ ಅಕ್ರಮವಾಗಿ ಹಲಸಿನ ಮರಗಳನ್ನು ಕಡಿದು ದಾಸ್ತಾನು ಮಾಡಿದ್ದ ಪ್ರಕರಣವನ್ನು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.






ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಬಲ್ತಾರ ಎಂಬಲ್ಲಿ ವನ್ಯಜೀವಿ ವಿಭಾಗಕ್ಕೆ ಸೇರಿದ ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ಹಲಸಿನ ಮರಗಳನ್ನು ಕಡಿದು ದಾಸ್ತಾನು ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಅಧಿಕಾರಿಗಳಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಅ.13ರಂದು ವಲಯ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿ ಶರ್ಮಿಷ್ಠಾ ನೇತೃತ್ವದ ತಂಡ ಸ್ಥಳಕ್ಕೆ ದಾಳಿ ನಡೆಸಿತು.




ಕಾರ್ಯಾಚರಣೆ ವೇಳೆ ಆರು ಹಲಸಿನ ಮರದ ತುಂಡುಗಳು ಹಾಗೂ ಒಂದು ಹಲಸಿನ ಮರದ ದಿಮ್ಮಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.





ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯದ ಅನುಮತಿ ಪಡೆದು ಅ.14ರಂದು ನಾವೂರು ಗ್ರಾಮದ ಮೊರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಕಲಂ 27, 29, 35, 50, 51 ಹಾಗೂ 55ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಪ್ರಕರಣದಲ್ಲಿ ಇತರರೂ ಭಾಗಿಯಾಗಿರುವ ಶಂಕೆಯಿದ್ದು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ನೇತೃತ್ವದಲ್ಲಿ ಮುಂದಿನ ತನಿಖೆ ನಡೆಯುತ್ತಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!