ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಭವಾನಿ ಶಂಕರ್ ಅವರು ವರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ಮೂಡಿಗೆರೆ ತಾಲೂಕು ಪಂಚಾಯತ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ದಯಾವತಿ .ಎಂ. ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ
ಭವಾನಿ ಶಂಕರ್ ಅವರನ್ನು ಮೂಡಬಿದ್ರೆಗೆ ವರ್ಗಾವಣೆ ಮಾಡಲಾಗಿದ್ದು, ದಯಾವತಿ ಅವರು ಬೆಳ್ತಂಗಡಿ ತಾಲೂಕು ಪಂಚಾಯತ್‌ನ ನೂತನ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

