ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗುರುವಾಯನಕೆರೆ–ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಶಾಸಕ ಹರೀಶ್ ಪೂಂಜ ಆಗ್ರಹ

ಗುರುವಾಯನಕೆರೆ–ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಶಾಸಕ ಹರೀಶ್ ಪೂಂಜ ಆಗ್ರಹ

 




ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುರುವಾಯನಕೆರೆ–ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಅಗತ್ಯ ಅನುದಾನ ಮಂಜೂರು ಮಾಡುವಂತೆ ಶಾಸಕ ಹರೀಶ್ ಪೂಂಜ ಅವರು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಶೀಘ್ರ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.





ಈ ರಸ್ತೆ ಈ ಭಾಗದ ಜನರ ದೈನಂದಿನ ಸಂಚಾರಕ್ಕೆ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದು, ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರ ಸುಗಮ ಸಂಚಾರ, ರಸ್ತೆ ಸುರಕ್ಷತೆ ಹಾಗೂ ಪ್ರಾದೇಶಿಕ ಅಭಿವೃದ್ಧಿಗೆ ಹೆಚ್ಚಿನ ಅನುಕೂಲವಾಗಲಿದೆ.



ಜನರ ಹಿತದೃಷ್ಟಿಯಿಂದ ಈ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಅಗತ್ಯ ಅನುದಾನ ಬಿಡುಗಡೆ ಮಾಡಿ, ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶೀಘ್ರ ಚಾಲನೆ ನೀಡಬೇಕು ಎಂದು ಶಾಸಕ ಹರೀಶ್ ಪೂಂಜ ಒತ್ತಾಯಿಸಿದ್ದಾರೆ.ಶ ಮನವಿಗೆ ಮುಖ್ಯ ಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಸ್ಪಂದಿಸಿದ್ದು, ಶೀಘ್ರ ಅನುದಾನ ಬಿಡುಗಡೆಗೊಳಿಸುವ ಭರವಸೆ ನೀಡಿದ್ದಾರೆ ಎಂದು ಹರೀಶ್ ಪೂಂಜ  ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!