ಬೆಳ್ತಂಗಡಿ: ಸೌಜನ್ಯ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಅಕ್ಟೋಬರ್ 31ರ ಶನಿವಾರ ಧರ್ಮಸ್ಥಳ ಗ್ರಾಮದ ಮಣ್ಣಸಂಕದ ಸಮೀಪ ಸೌಜನ್ಯ ನಾಪತ್ತೆಯಾಗಿದ್ದ ಸ್ಥಳ ಹಾಗೂ ಮೃತದೇಹ ಪತ್ತೆಯಾಗಿದ್ದ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದರು.
ಎಸ್‌ಐಟಿ ತನಿಖಾಧಿಕಾರಿ, ಐಪಿಎಸ್ ಅಧಿಕಾರಿ ಲೋಕೇಶ್ ಜಗಲಾಸರ್, ಎಸಿಪಿ ಮನೋಜ್ ಕುಮಾರ್ ನೇತೃತ್ವದಲ್ಲಿ ಬೆಂಗಳೂರು ಎಫ್‌ಎಸ್‌ಎಲ್ ತಂಡ, ಸೋಕೋ ತಂಡ, ವೈದ್ಯರ ತಂಡ, ಗ್ರಾಮ ಆಡಳಿತಾಧಿಕಾರಿ ಹಾಗೂ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯುಡಿ) ಇಂಜಿನಿಯರ್‌ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಸೌಜನ್ಯ ಅವರ ಮೃತದೇಹ ಪತ್ತೆಯಾದ ಸಂದರ್ಭದಲ್ಲಿ ದೂರು ನೀಡಿದ್ದ ಅವರ ಮಾವ ಪುರಂದರ ಗೌಡ ಹಾಗೂ ಸ್ಥಳ ಮಹಜರಿನ ಪಂಚರು ಕೂಡ ಉಪಸ್ಥಿತರಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ.





