ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ ಸೌಜನ್ಯ ಪ್ರಕರಣದ ಎಸ್‌ಐಟಿ ಮುಖ್ಯಸ್ಥರ ಬದಲಾವಣೆ: ಚೇತನ್ ಸಿಂಗ್ ರಾಥೋಡ್‌ಗೆ ಹೊಣೆ.

ಧರ್ಮಸ್ಥಳ ಸೌಜನ್ಯ ಪ್ರಕರಣದ ಎಸ್‌ಐಟಿ ಮುಖ್ಯಸ್ಥರ ಬದಲಾವಣೆ: ಚೇತನ್ ಸಿಂಗ್ ರಾಥೋಡ್‌ಗೆ ಹೊಣೆ.




ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಎಸ್‌ಐಟಿ ಮುಖ್ಯಸ್ಥರಾಗಿದ್ದ ಎನ್. ಶಶಿಕುಮಾರ್ ಅವರ ಸ್ಥಾನಕ್ಕೆ ಬೆಂಗಳೂರು ಸಿಐಡಿ ವಿಭಾಗದ ಐಜಿಪಿ ಚೇತನ್ ಸಿಂಗ್ ರಾಥೋಡ್ ಅವರನ್ನು ನೂತನ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.


ಎಸ್‌ಐಟಿಯಿಂದ ಬಿಡುಗಡೆ ಮಾಡುವಂತೆ ಕೋರಿ ಎನ್. ಶಶಿಕುಮಾರ್ ಅವರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬೆನ್ನಲ್ಲೇ ಈ ಬದಲಾವಣೆ ನಡೆದಿದೆ.


ಗೃಹ ಇಲಾಖೆಯು 2026ರ ಅಕ್ಟೋಬರ್ 30ರಂದು ಹೊರಡಿಸಿರುವ ತಿದ್ದುಪಡಿ ಆದೇಶ (ಸಂಖ್ಯೆ: ಹೆಚ್‌ಡಿ 228 ಸಿಐಡಿ 2026) ಪ್ರಕಾರ, ಸೆಪ್ಟೆಂಬರ್ 24ರಂದು ರಚಿಸಲಾಗಿದ್ದ ಎಸ್‌ಐಟಿ ತಂಡದ ಪಟ್ಟಿಯಲ್ಲಿ ಇಬ್ಬರು ಅಧಿಕಾರಿಗಳನ್ನು ಬದಲಾವಣೆ ಮಾಡಲಾಗಿದೆ.



ಕ್ರಮ ಸಂಖ್ಯೆ 01ರಲ್ಲಿದ್ದ ಎಸ್‌ಐಟಿ ಮುಖ್ಯಸ್ಥ ಎನ್. ಶಶಿಕುಮಾರ್ ಅವರ ಬದಲಿಗೆ ಬೆಂಗಳೂರು ಸಿಐಡಿ ಐಜಿಪಿ ಚೇತನ್ ಸಿಂಗ್ ರಾಥೋಡ್ (ಐಪಿಎಸ್) ಅವರನ್ನು ನೇಮಕ ಮಾಡಲಾಗಿದೆ. ಅದೇ ರೀತಿ, ಕ್ರಮ ಸಂಖ್ಯೆ 05ರಲ್ಲಿದ್ದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಎನ್. ವೆಂಕಟೇಶ್ ಪ್ರಸನ್ನ ಅವರ ಬದಲಿಗೆ ಹಾಸನ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀನಿಧಿ ಅವರನ್ನು ಎಸ್‌ಐಟಿ ಸದಸ್ಯರನ್ನಾಗಿ ನೇಮಿಸಲಾಗಿದೆ.


ಉಳಿದಂತೆ ತಂಡದಲ್ಲಿದ್ದ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ, ನಿಶಾ ಜೇಮ್ಸ್ ಹಾಗೂ ಲೋಕೇಶ್ ಜಗಲಾಸರ್ ಅವರು ಸದಸ್ಯರಾಗಿ ಮುಂದುವರಿಯಲಿದ್ದಾರೆ.


ಈ ಬದಲಾವಣೆಯೊಂದಿಗೆ ಸೌಜನ್ಯ ಪ್ರಕರಣದ ಮರುತನಿಖೆ ನಡೆಸುತ್ತಿರುವ ಎಸ್‌ಐಟಿಗೆ ಹೊಸ ನಾಯಕತ್ವ ದೊರೆತಂತಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!