ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸೌತಡ್ಕದಲ್ಲಿ ಮಹಿಳೆಯ ಮೇಲಿನ ದೌರ್ಜನ್ಯ ಖಂಡನೆ: ನಿಶ್ಮಿತಾ ಅವರಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಬೆಂಬಲ.

ಸೌತಡ್ಕದಲ್ಲಿ ಮಹಿಳೆಯ ಮೇಲಿನ ದೌರ್ಜನ್ಯ ಖಂಡನೆ: ನಿಶ್ಮಿತಾ ಅವರಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಬೆಂಬಲ.

 





ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕದಲ್ಲಿ ಅಂಗಡಿ ಕೋಣೆಗಳ ವಿವಾದಕ್ಕೆ ಸಂಬಂಧಿಸಿದಂತೆ ನಿಡ್ಲೆ ಗ್ರಾಮದ ಬೂಡುಜಾಲು ಸೂರ್ಲ ಮನೆಯ ನಿಶ್ಮಿತಾ ಅವರ ಮೇಲೆ ರಾಘವ ಭಂಡಾರಿ  ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಘಟನೆಗೆ ಸಂಬಂಧಿಸಿ, ಯುವವಾಹಿನಿ ಬೆಳ್ತಂಗಡಿ ಘಟಕದ ಪದಾಧಿಕಾರಿಗಳು ನಿಶ್ಮಿತಾ ಅವರನ್ನು ಭೇಟಿ ಮಾಡಿ ಸಾಂತ್ವನ ಹಾಗೂ ಬೆಂಬಲ ಸೂಚಿಸಿದರು.



ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಿಶ್ಮಿತಾ ಅವರನ್ನು ಇಂದು ಭೇಟಿ ಮಾಡಿದ ಯುವವಾಹಿನಿ ಬೆಳ್ತಂಗಡಿ ಘಟಕದ ಪದಾಧಿಕಾರಿಗಳು, ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು. ಅಲ್ಲದೆ, ನಿಶ್ಮಿತಾ ಅವರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ನಡೆಯುವ ನ್ಯಾಯಪರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.



ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಗೌರವ ಸಲಹೆಗಾರ ರಮಾನಂದ ಸಾಲಿಯಾನ್ ಮುಂಡೂರು, ಯುವವಾಹಿನಿ ಕೇಂದ್ರ ಸಮಿತಿಯ ಆರೋಗ್ಯ ನಿರ್ದೇಶಕ ಹಾಗೂ ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಮುಡುಕೋಡಿ, ಬೆಳ್ತಂಗಡಿ ಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದ ನಿರ್ದೇಶಕ ಗುರುರಾಜ್ ಗುರಿಪಳ್ಳ ಹಾಗೂ ಯುವವಾಹಿನಿ ಬೆಳ್ತಂಗಡಿ ಘಟಕದ ಪ್ರಧಾನ ಕಾರ್ಯದರ್ಶಿ ಅಶ್ವಿನ್ ಬಳಂಜ ಉಪಸ್ಥಿತರಿದ್ದರು.




ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!