ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವಿದ್ವತ್ ಪಿಯು ಕಾಲೇಜಿನಲ್ಲಿ ಶಾರದಾ ಪೂಜೆ ಸಂಭ್ರಮ .

ವಿದ್ವತ್ ಪಿಯು ಕಾಲೇಜಿನಲ್ಲಿ ಶಾರದಾ ಪೂಜೆ ಸಂಭ್ರಮ .

 


ಬೆಳ್ತಂಗಡಿ: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ     ಜ್ಞಾನದ ಅಧಿದೇವತೆ ತಾಯಿ ಶಾರದಾದೇವಿಯ ಪೂಜೆಯು ಆ 20 ರಂದು  ಶ್ರದ್ಧಾಭಕ್ತಿಯಿಂದ ನೆರವೇರಿತು.


ವಿದ್ಯಾರ್ಥಿಗಳಲ್ಲಿ ವಿದ್ಯೆ, ಜ್ಞಾನ, ಸಂಸ್ಕಾರ ಹಾಗೂ ಸೃಜನಶೀಲತೆಯ ಬೆಳವಣಿಗೆಯಾಗಲಿ ಎಂಬ ಆಶಯದೊಂದಿಗೆ ತಾಯಿ ಶಾರದಾದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.



ಈ ಸಂದರ್ಭದಲ್ಲಿ ಕಾಲೇಜಿನ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ದೀಪ ಬೆಳಗಿ, ತಾಯಿ ಶಾರದಾದೇವಿಯ ಕೃಪೆ ಎಲ್ಲ ವಿದ್ಯಾರ್ಥಿಗಳ ಮೇಲಿರಲಿ, ಅವರ ಶೈಕ್ಷಣಿಕ ಬದುಕು ಜ್ಞಾನ, ಯಶಸ್ಸು ಮತ್ತು ಸಾಧನೆಗಳಿಂದ ಬೆಳಗಲಿ ಎಂದು ಶುಭ ಹಾರೈಸಿದರು.




ಈ ವೇಳೆ ಸಂಸ್ಥೆಯ ಕಾರ್ಯದರ್ಶಿ ಪ್ರಜ್ವಲ್ ಕೆ.ರೈ, ಖಜಾಂಚಿ ಕಾಶೀನಾಥ ಎಂ.ಕೆ., ಟ್ರಸ್ಟಿ ರೇಷ್ಮಾ ಸುಭಾಶ್ಚಂದ್ರ ಶೆಟ್ಟಿ, ಪ್ರಾಂಶುಪಾಲರಾದ ಬಾಲಕೃಷ್ಣ ನಾಯಕ್, ಆಡಳಿತಾಧಿಕಾರಿ ಅಶೋಕ ಕುಮಾರ್ ಶೆಟ್ಟಿ, ಉಪ ಪ್ರಾಂಶುಪಾಲರಾದ ನೀಲಕಂಠ, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬಂದಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡು ತಾಯಿ ಶಾರದೆಗೆ ನಮನ ಸಲ್ಲಿಸಿದರು.




ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!