ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ತಾಲೂಕಿಗೆ ಒಲಿದ 10 ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪತ್ರಕರ್ತ ಮನೋಹರ ಬಳೆಂಜ, ರಾಜಕೇಸರಿ ಸಂಘಟನೆ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ,ಶಾಸಕ ಹರೀಶ್ ಪೂಂಜ ಅಭಿನಂದನೆ:

ಬೆಳ್ತಂಗಡಿ ತಾಲೂಕಿಗೆ ಒಲಿದ 10 ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪತ್ರಕರ್ತ ಮನೋಹರ ಬಳೆಂಜ, ರಾಜಕೇಸರಿ ಸಂಘಟನೆ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ,ಶಾಸಕ ಹರೀಶ್ ಪೂಂಜ ಅಭಿನಂದನೆ:

 


ಬೆಳ್ತಂಗಡಿ: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ  ತಾಲೂಕಿನ ಏಳು ಮಂದಿ ಸಾಧಕರು ಹಾಗೂ ಎರಡು ಸಂಘ-ಸಂಸ್ಥೆಗಳು ಸೇರಿದಂತೆ ಒಟ್ಟು ಹತ್ತು ಮಂದಿಗೆ ಈ ಬಾರಿಯ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.





ಪತ್ರಿಕೋದ್ಯಮ, ಸಮಾಜ ಸೇವೆ, ಕಲಾ ಕ್ಷೇತ್ರ, ಶಿಕ್ಷಣ, ಜಾನಪದ ಹಾಗೂ ಸಾಮಾಜಿಕ ಚಟುವಟಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಕೊಡುಗೆ ನೀಡಿರುವ ತಾಲೂಕಿನ ಸಾಧಕರನ್ನು ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.




ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಜಯವಾಣಿ ದಿನಪತ್ರಿಕೆಯ ಬೆಳ್ತಂಗಡಿ ವರದಿಗಾರ ಹಾಗೂ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಮನೋಹರ ಬಳೆಂಜ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಮಾಜ ಸೇವಾ ಕ್ಷೇತ್ರದಲ್ಲಿ ಹಲವು ಅಶಕ್ತ ಕುಟುಂಬಗಳಿಗೆ ನೆರವಿನ ಹಸ್ತ ಚಾಚುವ ಮೂಲಕ ಮಾನವೀಯ ಸೇವೆಯಲ್ಲಿ ತೊಡಗಿಸಿಕೊಂಡಿರುವ ರಾಜಕೇಸರಿ ಸಂಘಟನೆ ಪ್ರಶಸ್ತಿ ಪಡೆದುಕೊಂಡಿದೆ. ಅದೇ ರೀತಿ ಕಲಾ ಕ್ಷೇತ್ರದಲ್ಲಿ ಸುಂದರ ಬಂಗಾಡಿ, ಸಮಾಜ ಸೇವಾ ಕ್ಷೇತ್ರದಲ್ಲಿ ಸ್ನೇಕ್ ಜೋಯ್ ಹಾಗೂ ಜನಾರ್ದನ ಪೂಜಾರಿ, ಶಿಕ್ಷಣ ಕ್ಷೇತ್ರದಲ್ಲಿ ಡಾ. ಮಹೇಶ್ ಕುಮಾರ್ ಶೆಟ್ಟಿ, ಜಾನಪದ ಕ್ಷೇತ್ರದಲ್ಲಿ ಹಳ್ಳಿ ಮನೆ ಹೈದರ್  ಸುರೇಶ್ ಪರವ, ಮತ್ತು ಬೇಬಿ ಪರವ ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇದರೊಂದಿಗೆ ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ರಾಜ ಕೇಸರಿ ಸೇವಾ ಟ್ರಸ್ಟ್, ನಾರಾವಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಕೂಡ ಪ್ರಶಸ್ತಿಗೆ ಪಾತ್ರವಾಗಿದೆ.

ನವೆಂಬರ್ 1ರಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ಪುರಸ್ಕಾರ ಪಡೆದವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!