ಬೆಳ್ತಂಗಡಿ: ,ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಚರ್ಚ್ ಕ್ರಾಸ್ ಬಳಿ ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಗೂಡ್ಸ್ ವಾಹನವು ಗುರುವಾಯನಕೆರೆ ಕಡೆಗೆ ಸಂಚರಿಸುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊರ್ವ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತರನ್ನು ನಾವೂರು ನಿವಾಸಿ ಸಂತೋಷ್ (32) ಹಾಗೂ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಮೋಹನ್ (33) ಎಂದು ಗುರುತಿಸಲಾಗಿದೆ.
ಗೂಡ್ಸ್ ವಾಹನದ ಚಾಲಕ ನಿದ್ರೆಯ ಮಂಪರಿನಲ್ಲಿ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿರಬಹುದು ಎನ್ನಲಾಗಿದೆ.




