ಬೆಳ್ತಂಗಡಿ: ಸಂತೆಕಟ್ಟೆ ಸಮೀಪ ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದ ನೀರಿನ ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಬೆಳ್ತಂಗಡಿಯಿಂದ ಗುರುವಾಯನಕೆರೆ ಕಡೆಗೆ ಕಾರು ಸಂಚರಿಸುತ್ತಿದ್ದ ವೇಳೆ ಸಂತೆಕಟ್ಟೆ ಸಮೀಪ ಈ ಅಪಘಾತ ಸಂಭವಿಸಿದೆ. ಇದೇ ಸಂದರ್ಭದಲ್ಲಿ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿದ್ದ ನೀರಿನ ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಟ್ಯಾಂಕರ್ ಡಿಕ್ಕಿಯ ರಭಸಕ್ಕೆ ಕಾರು ನಚ್ಚುಗುಚ್ಚಾಗಿದ್ದು, ಪ್ರ ಗಾಯಗಳಾಗಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದುಲಾಗಿದೆ.
ಘಟನೆಯ ವೇಳೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು,ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.



