ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ವಕೀಲರ ಸಂಘದಿಂದ ತಾಲೂಕು ಕಛೇರಿ ಎದುರು ಪ್ರತಿಭಟನೆ: ವಕೀಲರ ರಕ್ಷಣೆಗೆ ಅಡ್ವೊಕೇಟ್ಸ್ ಪ್ರೊಟೆಕ್ಷನ್ ಆಕ್ಟ್ ಬಲಪಡಿಸಲು ಆಗ್ರಹ;

ಬೆಳ್ತಂಗಡಿ ವಕೀಲರ ಸಂಘದಿಂದ ತಾಲೂಕು ಕಛೇರಿ ಎದುರು ಪ್ರತಿಭಟನೆ: ವಕೀಲರ ರಕ್ಷಣೆಗೆ ಅಡ್ವೊಕೇಟ್ಸ್ ಪ್ರೊಟೆಕ್ಷನ್ ಆಕ್ಟ್ ಬಲಪಡಿಸಲು ಆಗ್ರಹ;




ಬೆಳ್ತಂಗಡಿ: : ರಾಜ್ಯದ ವಿವಿಧೆಡೆ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆ, ಕೊಲೆ, ಕೊಲೆ ಯತ್ನ ಹಾಗೂ ಬೆದರಿಕೆ ಪ್ರಕರಣಗಳನ್ನು ತಡೆಗಟ್ಟಲು ಅಡ್ವೊಕೇಟ್ಸ್ ಪ್ರೊಟೆಕ್ಷನ್ ಆಕ್ಟ್ ಅನ್ನು ಬಲಪಡಿಸಿ, ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿಯೇ ತಿದ್ದುಪಡಿ ಮಸೂದೆ ಮಂಡಿಸಿ ಅಂಗೀಕರಿಸುವಂತೆ ಆಗ್ರಹಿಸಿ ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗ ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.




ಪ್ರತಿಭಟನೆಯಲ್ಲಿ ಮಾತನಾಡಿದ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೊ, ರಾಜ್ಯದ ವಿವಿಧ ಭಾಗಗಳಲ್ಲಿ ವಕೀಲರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ, ಬೆದರಿಕೆ ಹಾಗೂ ಕೊಲೆ ಪ್ರಕರಣಗಳು ವಕೀಲ ಸಮುದಾಯದಲ್ಲಿ ಆತಂಕ ಮತ್ತು ಅಭದ್ರತೆಯ ಭಾವನೆ ಮೂಡಿಸಿವೆ ಎಂದರು.




ಇತ್ತೀಚೆಗೆ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ವಕೀಲ ಮಂಜುನಾಥ್ ಅವರ ಕೊಲೆ, ಅನ್ನಪೂರ್ಣೇಶ್ವರಿ ನಗರದಲ್ಲಿ ವಕೀಲ ಶ್ರೀರಾಮ್ ಅವರ ಕೊಲೆ ಹಾಗೂ ಗೌರಿಬಿದನೂರಿನ ವಕೀಲರ ಸಂಘದ ಸದಸ್ಯ ವೆಂಕಟ್ರಮಣ ಸನ್ನಕ್ಕಿ ಅವರ ಮೇಲಿನ ಕೊಲೆ ಯತ್ನ ಪ್ರಕರಣಗಳು ವಕೀಲರ ಸುರಕ್ಷತೆಯ ಕುರಿತು ಗಂಭೀರ ಚಿಂತನೆಗೆ ಕಾರಣವಾಗಿವೆ ಎಂದು ಹೇಳಿದರು.

ವಕೀಲರಿಗೆ ಸೂಕ್ತ ಕಾನೂನು ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಅಡ್ವೊಕೇಟ್ಸ್ ಪ್ರೊಟೆಕ್ಷನ್ ಆಕ್ಟ್ ಅನ್ನು ಇನ್ನಷ್ಟು ಬಲಪಡಿಸುವುದು ಸರಕಾರದ ಜವಾಬ್ದಾರಿಯಾಗಿದೆ. ವಕೀಲರ ಮೇಲಿನ ಹಲ್ಲೆ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವ ಜತೆಗೆ, ವೃತ್ತಿ ನಿರ್ವಹಣೆಗೆ ಸುರಕ್ಷಿತ ಮತ್ತು ಭದ್ರ ವಾತಾವರಣ ನಿರ್ಮಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯ ಬಳಿಕ ವಕೀಲರ ಸಂಘದ ವತಿಯಿಂದ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.ಈ ವೇಳೆ  ಸಂಘದ ಪದಾಧಿಕಾರಿಗಳು, ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!