ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪುದುವೆಟ್ಟು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ ಶಾಸಕ ಹರೀಶ್ ಪೂಂಜ ಅವರ ಸಮ್ಮುಖದಲ್ಲಿ ಬಿಜು, ಶಿಜಿ ಹಾಗೂ ಪೌಲೋಸ್ ಬಿಜೆಪಿ ಸೇರ್ಪಡೆ.

ಪುದುವೆಟ್ಟು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ ಶಾಸಕ ಹರೀಶ್ ಪೂಂಜ ಅವರ ಸಮ್ಮುಖದಲ್ಲಿ ಬಿಜು, ಶಿಜಿ ಹಾಗೂ ಪೌಲೋಸ್ ಬಿಜೆಪಿ ಸೇರ್ಪಡೆ.

 


ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರಾದ ಬಿಜು, ಶಿಜಿ ಹಾಗೂ ಪೌಲೋಸ್ ಅವರು ಭಾರತೀಯ ಜನತಾ ಪಾರ್ಟಿಯ ತತ್ವ ಸಿದ್ಧಾಂತಗಳನ್ನು ಒಪ್ಪಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಡಳಿತ ವೈಖರಿಯನ್ನು ಮೆಚ್ಚಿ ಹಾಗೂ ಶಾಸಕ ಹರೀಶ್ ಪೂಂಜ ಅವರ ಅಭಿವೃದ್ಧಿ ಕಾರ್ಯಗಳಿಂದ ಪ್ರೇರಿತರಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.






ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಅಸಮಾಧಾನ ಹಾಗೂ ತಾಲೂಕು ಕಾಂಗ್ರೆಸ್‌ನ ನಾಯಕತ್ವದ ಬಗ್ಗೆ ಬೇಸರ ವ್ಯಕ್ತಪಡಿಸಿ, ಶಾಸಕರಾದ ಹರೀಶ್ ಪೂಂಜ ಅವರ ಸಮ್ಮುಖದಲ್ಲಿ ಅವರು ಬಿಜೆಪಿಯ ಸದಸ್ಯತ್ವ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ, ಪ್ರಧಾನ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಗೌಡ, ಮಂಡಲ ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ಎಂ.ಕೆ., ಪುದುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷ ಪೂರ್ಣಾಕ್ಷ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!