ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಆಟೋ ಚಾಲಕ ಹೃದಯಾಘಾತದಿಂದ ನಿಧನ:

ಬೆಳ್ತಂಗಡಿ ಆಟೋ ಚಾಲಕ ಹೃದಯಾಘಾತದಿಂದ ನಿಧನ:




ಬೆಳ್ತಂಗಡಿ: ನಡ ಗ್ರಾಮದ ಕೋಡ್ಲೆ ನಿವಾಸಿ, ಚಾಲಕ ಅಶ್ರಫ್ (44) ಅವರು ಗುರುವಾರ ಸಂಜೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.

ಸಂಜೆ ಮನೆಯಲ್ಲಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.





ಜನಸಾಮಾನ್ಯರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಅಶ್ರಫ್ ಅವರು ಕೋಡ್ಲೆ ಎಂದೇ ಚಿರಪರಿಚಿತರಾಗಿದ್ದರು. ಸ್ವಂತ ಆಟೋ ರಿಕ್ಷಾದ ಚಾಲಕ ಹಾಗೂ ಮಾಲಕರಾಗಿದ್ದ ಅವರು ಘನ ವಾಹನ ಚಾಲಕರಾಗಿಯೂ ಗುರುತಿಸಿಕೊಂಡಿದ್ದರು. ಎಲ್ಲರೊಂದಿಗೂ ಆತ್ಮೀಯವಾಗಿ ಬೆರೆಯುತ್ತಿದ್ದ ಅವರು ಬೆಳ್ತಂಗಡಿ ಬಸ್ ನಿಲ್ದಾಣ ಆಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಸದಸ್ಯರಾಗಿದ್ದರು.


ಮೃತರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗ ಮತ್ತು ಸ್ನೇಹಿತರನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!