ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸಂವಿಧಾನ ಮತ್ತು ಮನುಸ್ಮೃತಿ ನಡುವಿನ ಸಂಘರ್ಷದಲ್ಲಿ ಅಂತಿಮ ಜಯ ಸಂವಿಧಾನಕ್ಕೆ: ಶಿವಸುಂದರ್.

ಸಂವಿಧಾನ ಮತ್ತು ಮನುಸ್ಮೃತಿ ನಡುವಿನ ಸಂಘರ್ಷದಲ್ಲಿ ಅಂತಿಮ ಜಯ ಸಂವಿಧಾನಕ್ಕೆ: ಶಿವಸುಂದರ್.





ಬೆಳ್ತಂಗಡಿ:  ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಸಂವಿಧಾನ ವಿರೋಧಿಯಾಗಿದ್ದು, ಇದರ ವಿರುದ್ಧ ಸಂವಿಧಾನದ ಆಧಾರದಲ್ಲಿ ಹೋರಾಟ ನಡೆಯುತ್ತಿದ್ದರೆ, ಬಿಜೆಪಿ ಮತ್ತು ಸಂಘಪರಿವಾರ ಮನುಸ್ಮೃತಿಯ ಆಧಾರದಲ್ಲಿ ಹೋರಾಟ ನಡೆಸುತ್ತಿವೆ. ದೇಶದಾದ್ಯಂತ ಸಂವಿಧಾನ ಮತ್ತು ಮನುಸ್ಮೃತಿ ನಡುವಿನ ಸಂಘರ್ಷ ಆರಂಭವಾಗಿದ್ದು, ಅಂತಿಮ ಜಯ ಸಂವಿಧಾನಕ್ಕೆ ಲಭಿಸಲಿದೆ ಎಂದು ಖ್ಯಾತ ಅಂಕಣಕಾರ ಹಾಗೂ ಚಿಂತಕ ಶಿವಸುಂದರ್ ಹೇಳಿದರು.








ಲೋಕತಂತ್ರ ಬಚಾವೋ ಆಂದೋಲನ ಸಮಿತಿ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಸೋಮವಾರ ಬೆಳ್ತಂಗಡಿಯಲ್ಲಿ ನಡೆದ ತಿರಂಗಾ ನಡಿಗೆ ಮತ್ತು ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.


SIR ಹೆಸರಿನಲ್ಲಿ ದೇಶದಾದ್ಯಂತ 13 ಕೋಟಿ ಹಾಗೂ ರಾಜ್ಯದಲ್ಲಿ

 ಒಂದು ಕೋಟಿ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ನುಸುಳುಕೋರರನ್ನು ಪತ್ತೆಹಚ್ಚುವ ನೆಪದಲ್ಲಿ ಭಾರತೀಯ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕುವ ದೇಶದ್ರೋಹದ ಕೆಲಸವನ್ನು ಚುನಾವಣಾ ಆಯೋಗದ ಮೂಲಕ ಜ್ಞಾನೇಶ್ ಕುಮಾರ್ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.







ರಾಜ್ಯದಲ್ಲಿ ಒಂದು ಕೋಟಿ ಮತದಾರರನ್ನು ಕೈಬಿಟ್ಟಿರುವ ಚುನಾವಣಾ ಆಯೋಗದ ಕ್ರಮವನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಒತ್ತಾಯಿಸಿದ ಅವರು, SIR ರದ್ದುಗೊಳಿಸುವ ಹಾಗೂ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೆ ಪ್ರಜಾಪ್ರಭುತ್ವ ಉಳಿಸುವ ಹೋರಾಟ ಮುಂದುವರಿಯಲಿದೆ ಎಂದರು.


ಲೋಕತಂತ್ರ ಬಚಾವೋ ಆಂದೋಲನ ಸಮಿತಿ ಬೆಳ್ತಂಗಡಿ ಸಂಚಾಲಕ ಶೇಖರ್ ಲಾಯಿಲ ಮಾತನಾಡಿ, ಬಿಜೆಪಿ ವಿರೋಧಿ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ನರೇಂದ್ರ ಮೋದಿ ಮತ್ತು ಅಮಿತ್ ಶಾ ತಂಡ ಜ್ಞಾನೇಶ್ ಕುಮಾರ್ ಮೂಲಕ RSSನ ಗುಪ್ತ ಅಜೆಂಡಾವನ್ನು ಜಾರಿಗೊಳಿಸುತ್ತಿದೆ ಎಂದು ಆರೋಪಿಸಿದರು.


ದಲಿತ, ಆದಿವಾಸಿ, ಮುಸ್ಲಿಂ, ಕ್ರೈಸ್ತ ಹಾಗೂ ಹಿಂದುಳಿದ ವರ್ಗಗಳ ಮತದಾರರನ್ನು ವ್ಯವಸ್ಥಿತವಾಗಿ ಹೊರಗಿಡಲಾಗುತ್ತಿದೆ. ಸ್ವಾಯತ್ತ ಸಂಸ್ಥೆಯಾಗಿದ್ದ ಚುನಾವಣಾ ಆಯೋಗವನ್ನು ಇಂದು RSS ಕಚೇರಿಯಾಗಿ ಪರಿವರ್ತಿಸಲಾಗಿದೆ ಎಂದು ಆರೋಪಿಸಿದ ಅವರು, ದೇಶದ ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ದೇಶಾದ್ಯಂತ ನಡೆಯುತ್ತಿರುವ ಜನಾಂದೋಲನಕ್ಕೆ ಶಕ್ತಿ ತುಂಬಲು ಬೆಳ್ತಂಗಡಿಯಲ್ಲಿ ಈ ಹೋರಾಟ ಆಯೋಜಿಸಲಾಗಿದೆ ಎಂದರು.


ಪ್ರತಿಭಟನೆಯನ್ನು ಉದ್ದೇಶಿಸಿ ಪ್ರಜಾಪ್ರಭುತ್ವ ಉಳಿಸಿ ಆಂದೋಲನದ ಜಿಲ್ಲಾ ಸಂಚಾಲಕ ಹಾಗೂ ನ್ಯಾಯವಾದಿ ವಿನೋದ್ ಮಸ್ಕರೇನಸ್, RYA ಜಿಲ್ಲಾ ಉಪಸಂಚಾಲಕ ಲುಕ್ಮಾನ್ ನೆಲ್ಯಾಡಿ, ವೆಲ್ಪೆರ್ ಪಾರ್ಟಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಪದರಂಗಿ ಹಾಗೂ SKSSF ರಾಜ್ಯ ಉಪಾಧ್ಯಕ್ಷ ಕೆ.ಎಸ್. ಇಕ್ಬಾಲ್ ಬಾಳಿಲ ಮಾತನಾಡಿದರು.


ಲೋಕತಂತ್ರ ಬಚಾವೋ ಆಂದೋಲನ ಸಮಿತಿ ಬೆಳ್ತಂಗಡಿ ಸಹಸಂಚಾಲಕರಾದ ಶಾಫಿ ಬಂಗಾಡಿ, ಗ್ರೇಸಿ ಲೋಬೋ, ವೆಲ್ಪೆರ್ ಪಾರ್ಟಿ ಜಿಲ್ಲಾಧ್ಯಕ್ಷ ಎಂ. ದಿವಾಕರ ರಾವ್, ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಜಾರುದ್ದೀನ್, ಸೋಲಿಡಾರ್ಟಿ ಯೂತ್ ಮೂವ್ಮೆಂಟ್ ಜಿಲ್ಲಾಧ್ಯಕ್ಷ ಅಸ್ಲಾಂ ಪಂಜಲ, ಮುಖಂಡರಾದ ಸಂಜೀವ್ ನಾಯ್ಕ್, ನಿಲೇಶ್ ಎಚ್. ಪೆರಿಂಜೆ ಮೊದಲಾದವರು ನೇತೃತ್ವ ವಹಿಸಿದ್ದರು.


ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ಭಾರಿ ಮಳೆಯ ನಡುವೆಯೂ ತಿರಂಗಾ ನಡಿಗೆ ನಡೆಯಿತು. ಪ್ರತಿಭಟನಾಕಾರರು ಮಳೆಯಲ್ಲಿ ನೆನೆಯುತ್ತಲೇ ನಡಿಗೆಯಲ್ಲಿ ಪಾಲ್ಗೊಂಡರು. ಶಿವಸುಂದರ್ ಕೂಡ ಪ್ರತಿಭಟನಾಕಾರರೊಂದಿಗೆ ಮಳೆಯಲ್ಲಿ ನೆನೆಯುತ್ತಾ ನಡಿಗೆಯಲ್ಲಿ ಭಾಗವಹಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!